ಮೈಸೂರು

ಧಗಧಗನೆ ಹೊತ್ತಿ ಉರಿದ ಮೊಬೈಲ್ ಟವರ್

ಮೈಸೂರು,ಫೆ.27:- ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್ ಒಂದು ಧಗಧಗನೆ ಹೊತ್ತಿ ಉರಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿರುವ ಮೊಬೈಲ್ ಟವರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯುತ್ತಿರುವುದನ್ನು ಕಂಡ ಸಾರ್ವಜನಿಕರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸರಸ್ವತಿಪುರಂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: