ಮೈಸೂರು

ಜಿ.ಟಿ. ದೇವೇಗೌಡ ಹುಟ್ಟುಹಬ್ಬ ಕಾರ್ಯಕ್ರಮ

ಮೈಸೂರು ನಗರ (ಜಿಲ್ಲೆ) ಗ್ರಾಮಾಂತರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ನ.25 ರಂದು ಬೆಳಗ್ಗೆ 10 ಗಂಟೆಗೆ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರ 67ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ವೇಳೆ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಚಾಮುಂಡೇಶ್ವರಿ ಕ್ಷೇತ್ರದ ರೈತ ಕುಟುಂಬಗಳಿಗೆ ಪರಿಹಾರ ಧನ ವಿತರಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಕ್ಷದ ನಗರಾಧ್ಯಕ್ಷ ರಾಜಣ್ಣ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಮರಿತಿಬ್ಬೇಗೌಡ, ಶಾಸಕರಾದ ಸಾ.ರಾ. ಮಹೇಶ್, ಚಿಕ್ಕಮಾದು, ಸಂದೇಶ್ ನಾಗರಾಜು, ಶ್ರೀಕಂಠೇಗೌಡ, ಜಿ.ಪಂ. ಅಧ್ಯಕ್ಷರಾದ ನಯೀಮಾ ಸುಲ್ತಾನ್‍, ಮೇಯರ್ ಭೈರಪ್ಪ, ಮಾಜಿ ಮೇಯರ್‍ ಸಂದೇಶ್ ಸ್ವಾಮಿ, ಆಡಳಿತ ಪಕ್ಷದ ನಾಯಕರಾದ ಕೆ.ಟಿ. ಚಲುವೇಗೌಡ, ಮೈಲ್ಯಾಕ್‍ ಮಾಜಿ ಅಧ್ಯಕ್ಷ ಕೃಷ್ಣ, ಜಿಲ್ಲಾಧ್ಯಕ್ಷರಾದ ನರಸಿಂಹಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು.

Leave a Reply

comments

Related Articles

error: