
ಮೈಸೂರು
ಜೀನಿಯಸ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸ ಆಚರಣೆ
ಮೈಸೂರಿನ ಬನ್ನೂರು ರಸ್ತೆಯಲ್ಲಿರುವ “ಜೀನಿಯಸ್ ಕಾಲೇಜ್ ಆಫ್ ಸೈನ್ಸ್ ಆ್ಯಂಡ್ ಕಾಮರ್ಸ್” ಅಲ್ಲಿ ನ.18ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರಿನ ಬನುಮಯ್ಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಸುರೇಶ್ ಅವರು ವಹಿಸಿದ್ದರು. ಪರಿಸರ ಜಾಗೃತಿ ವೇದಿಕೆಯ ಲತಾ ಮೋಹನ್, ಜೀನಿಯಸ್ ಕಾಲೇಜು ಅಧ್ಯಕ್ಷರಾದ ಪ್ರಭು, ಕಾಲೇಜಿನ ಪ್ರಾಂಶುಪಾಲರಾದ ಸುರೇಖಾ ಪ್ರಭು, ಉಪ ಪ್ರಾಂಶುಪಾಲರಾದ ಸುಧೀರ್ ಅವರುಗಳು ಪಾಲ್ಗೊಂಡಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.