ಕರ್ನಾಟಕ

ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಮಾಡಿದರೆ ದೇಶದ ಸಾಧನೆ ವಿಶ್ವಮಟ್ಟದಲ್ಲಿ ಇನ್ನಷ್ಟು ಬೆಳಗಲಿದೆ : ಟಿ.ಜಿ.ಪ್ರೇಮ್ ಕುಮಾರ್

ರಾಜ್ಯ(ಮಡಿಕೇರಿ)ಫೆ.28:-  ಭಾರತೀಯ ವಿಜ್ಞಾನಿಗಳ ಸಾಧನೆಯನ್ನು ಅಧ್ಯಯನ ಮಾಡಿ ಮೂಲ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಮಾಡಿದರೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ದೇಶದ ಸಾಧನೆ ವಿಶ್ವಮಟ್ಟದಲ್ಲಿ ಇನ್ನಷ್ಟು ಬೆಳಗಲಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮ್ ಕುಮಾರ್ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್, ರೋಟರಿ ಸಂಸ್ಥೆ ಸಹಭಾಗಿತ್ವದಲ್ಲಿ ಬುಧವಾರ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ      “ ವಿಜ್ಞಾನ ಮೇಳಕ್ಕೆ ”  ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಸರ್.ಸಿ.ವಿ.ರಾಮನ್ ಕ್ಷಿಪಣಿ ತಜ್ಞ ಡಾ. ಎ.ಪಿ.ಜೆ. ಅಬ್ದುಲ್ ಕಲಾಮ್, ಭಾರತ ರತ್ನ ಪ್ರೊಫೆಸರ್, ಸಿ.ಎನ್.ಆರ್.ರಾವ್ ಅವರಂತಹ ಭಾರತೀಯ ವಿಜ್ಞಾನಿಗಳ ಸಾಧನೆಯನ್ನು ಅಧ್ಯಯನ ಮಡಬೇಕು. ವಿಧ್ಯಾರ್ಥಿಗಳು ಯೋಜನಾ ಬದ್ದ ಚಿಂತನೆ ಮತ್ತು ದುಡಿಮೆಯಿಂದ ವಿಜ್ಞಾನವನ್ನು ಅಭ್ಯಸಿಸಿದರೆ ತಾವೂ ಉತ್ತಮ ವಿಜ್ಞಾನಿಗಳು ಆಗಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸರಕಾರಿ ಮಾದರಿ ಪ್ರಾರ್ಥಮಿಕ ಶಾಲೆಯ ಪದವೀದರ ಮುಖ್ಯ ಶಿಕ್ಷಕರಾದ ಎಂ.ಜೆ.ಅಣ್ಣಮ್ಮ ಮಾತನಾಡಿ ವಿಶೇಷವಾದ ಜ್ಞಾನವನ್ನು ಹೊಂದಿರುವ ವಿಜ್ಞಾನವನ್ನು ಹೊಂದಿರುವ ವಿಜ್ಞಾನದ ಕಲಿಕೆಯಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡರೆ ಇನ್ನಷ್ಟು ಜ್ನಾನವನ್ನು ಸಂಪಾದಿಸಲು ಸಾಧ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಸಂಸ್ಥೆಯ ಮಾಜಿ ಸಹಾಯಕ ರಾಜ್ಯಪಾಲ ಬಿ.ಎಸ್.ಸದಾನಂದ್ ಮಾತನಾಡಿ, ತಾಲೂಕಿನ 29 ಶಾಲೆಗಳಲ್ಲಿ ವಿಜ್ಞಾನ ವಾಹಿನಿ ಸಂಚಾರಿ ವಿಜ್ಞಾನ ಪ್ರಯೋಗಾಲಯದ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆಯನ್ನು ನಡಸಲಾಗಿದೆ. ವಿದ್ಯಾರ್ಥಿಗಳು ಮೂಢ ನಂಬಿಕೆಗಳನ್ನು ಹೋಗಲಾಡಿಸಿ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿಕ್ಷಣ ಸಂಯೋಜಕ ಮೂರ್ತಿ ವಿವೇಕಾನಂದ ಯೂತ್ ಮೂಮೆಂಟ್‍ನ ಪ್ರದೀಪ್ ಮಾತನಾಡಿದರು. ವಿದ್ಯಾರ್ಥಿ ಸಿ.ವಿ.ಆದಿತ್ಯ ಭಾರತಿಯ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕುರಿತು ವಿಚಾರ ಮಂಡಿಸಿದರು. ವೇದಿಕೆಯಲ್ಲಿ ಸರ್ಕಾರಿ ಪೌಡ ಶಾಲೆಯ ಮುಖ್ಯ ಶಿಕ್ಷಕ ತಳವಾರ್, ರೋಡರಿ ಸಂಸ್ಥೆಯ ಮೂಜಿ ಅಧ್ಯಕ್ಷ ಬಿಡ್ಡಪ್ಪ ಹಾಗು ಶಿಕ್ಷಕ ಹ್ಯೂಬರ್ಟ್ ಉಪಸ್ಥಿತರಿದ್ದರು.

ತಾಲ್ಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಪ್ರಯೋಗಗಳ ಮೂಲಕ ಪ್ರಾತ್ಯಕ್ಷಿಕೆ ನಡೆಸಿದರು. ವಿಜ್ಞಾನದ ಕುರಿತು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: