
ಕರ್ನಾಟಕ
ಜಲ ಸಂಪತ್ತನ್ನು ಮಿತವಾಗಿ ಬಳಸಿ: ಮಂಡ್ಯ ಜಿ.ಪಂ. ಸಿಇಒ ಬಿ.ಶರತ್
ಮಂಡ್ಯ (ಫೆ.28): ಜಲ ಸಂಪತ್ತುನ್ನು ಮಿತವಾಗಿ ಬಳಸುವ ಜೊತೆಯಲ್ಲಿ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಮಂಡ್ಯ ಜಿಲ್ಲಾ ಪಂಚಾಯುತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಬಿ.ಶರತ್ ಅವರು ತಿಳಿಸಿದರು.
ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಣ್ಣ ನಿರ್ದೇಶಕರು, ಅಂತರ್ಜಲ ನಿರ್ದೇಶನಾಲಯ ಬೆಂಗಳೂರು, ಹಿರಿಯ ಭೂವಿಜ್ಞಾನಿ ಜಿಲ್ಲಾ ಅಂತರ್ಜಲ ಕಚೇರಿ ಹಾಗೂ ಅಂತರ್ಜಲ ನಿರ್ದೇಶನಾಲಯ ಮಂಡ್ಯ ಇವರ ಸಹಯೋಗದಲ್ಲಿ ನಡೆದ ಅಂತರ್ಜಲ ಜನಜಾಗೃತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಪಂಚಾಯಿತಿ ಮಟ್ಟದಲ್ಲಿ ನೀರಿನ ಸಮಸ್ಯ ನಿವಾರಿಸಲು, ಅಂತರ್ಜಲ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿ ಗ್ರಾಮದ ಜನತೆಗೆ ಅರಿವು ಮೂಡಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಬೇಕು. ಹವಮಾನ ವ್ಯಪರಿತ್ಯ ಎಲ್ಲರನ್ನು ಕಾಡುತ್ತಿದ್ದು, ಅಮೂಲ್ಯವಾದ ಜಲಸಂಪತ್ತುನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ನಿಟ್ಟಿನಲ್ಲಿ ಅಂತರ್ಜಲವನ್ನು ಸಂರಕ್ಷೀಸಬೇಕು ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ವಿಶೇಷ ಉಪನ್ಯಾಸ ನೀಡಿದ ಭೂವಿಜ್ಞಾನಿ ಪ್ರಾಣೇಶ್ ಮಾತನಾಡಿ ಕೊಳವೆ ಬಾವಿ ನಿರ್ಮಿಸುವ ಪೂರ್ವಭಾವಿಯಾಗಿ ಜಮೀನಿನ ಮಾಲಿಕರು 15 ದಿನ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಮತ್ತು ಆಯಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿಯ ಅಧಿಕಾರಿಗಳಿಗೆ ಲಿಖಿತ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಪ್ರೇಮ್ಕುಮಾರ್, ಕೃಷ್ಣರಾಜು, ಮುಖ್ಯ ಯೋಜನಾಧಿಕಾರಿ ಧನುಷ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದರು. (ಎನ್ಬಿ)