ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ರಸ್ತೆ ಕಳಪೆ ಕಾಮಗಾರಿ, ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಮಾ.1:- ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯರಸ್ತೆ ಕಾಮಗಾರಿ ಕಳಪೆಯದಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್ ಅಂಬೇಡ್ಕರ್ ಯುವದಲಿತ ಸಂಘಟನೆಯ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.

ಗುರುವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕಳೆದ ಮೂರು ವರ್ಷಗಳಿಂದ ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಕಳಪೆಕಾಮಗಾರಿಯಾಗಿದೆ. ಅನೇಕ ಬಾರಿ ಆಯುಕ್ತರ ಗಮನಕ್ಕೂ ತಂದಿದ್ದರೂ ಸಹ ಯಾವುದೇ ನಿರ್ಣಯವನ್ನು ಕೈಗೊಂಡಿಲ್ಲ. ಅವರ ಕಚೇರಿಯ ಸಂಬಂಧಪಟ್ಟ ಇಂಜಿನಿಯರುಗಳು ಗುತ್ತಿಗೆದಾರರೊಂದಿಗೆ ಶಾಮಿಲ್ ಆಗಿ ಕಳಪೆ ಮತ್ತು ನಿಧಾನ ಕಾಮಗಾರಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ಇಂಜಿನಿಯರ್ ಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಉಪಮಹಾಪೌರ ವಿ.ಶೈಲೇಂದ್ರ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: