ಮೈಸೂರು

ವಿದ್ಯಾಭ್ಯಾಸದ ಜತೆ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಿ: ಫಾದರ್ ಸಿಬಿ ಪ್ರಾನ್ಸಿಸ್

ಪಿರಿಯಾಪಟ್ಟಣ,(ಬೈಲಕುಪ್ಪೆ),ಮಾ.1-ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವಿದ್ಯಾಭ್ಯಾಸದ ಜತೆಗೆ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡರೆ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಫಾದರ್ ಸಿಬಿ ಪ್ರಾನ್ಸಿಸ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತ್ ಮಾತ ಪ್ರಥಮ ದರ್ಜೆ ಕಾಲೇಜು ವತಿಯಿಂದ ರಾಣಿಗೇಟ್ ಗ್ರಾಮದಲ್ಲಿ ಆಯೋಜಿಸಿದ್ದ 7 ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2017-2018 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಳಿಕ ಎನ್.ಎಸ್.ಎಸ್. ಅಧಿಕಾರಿ ಕೆ.ಆರ್.ದಿನೇಶ್ ಮಾತನಾಡಿ, ರಾಷ್ಟ್ರೀಯ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡು ರಾಷ್ಟ್ರ ಸೇವೆ, ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಂಡಾಗ ವಿದ್ಯೆ ತನ್ನದಾಗಿಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಪ್ಪ ಗ್ರಾಮಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ, ಭಾರತ್ ಮಾತ ಶಾಲೆಯ ಪ್ರಾಂಶುಪಾಲ ಫಾದರ್ ರೆನ್ನಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು. (ವರದಿ-ಆರ್.ಬಿ.ಆರ್, ಎಂ.ಎನ್)

Leave a Reply

comments

Related Articles

error: