
ಪ್ರಮುಖ ಸುದ್ದಿಮೈಸೂರು
ಮೈಸೂರಿನ ರೇಸ್ ಕ್ಲಬ್ ಕಾರ್ಯಚಟುವಟಿಕೆ ಸ್ಥಗಿತಕ್ಕೆ ಹೈ ಕೋರ್ಟ್ ತಡೆ
ಮೈಸೂರಿನ ರೇಸ್ ಕ್ಲಬ್ ಕಾರ್ಯಚಟುವಟಿಕೆ ಸ್ಥಗಿತಗೊಳಿಸುವಂತೆ ಲೋಕೋಪಯೋಗಿ ಇಲಾಖೆ ನೀಡಿದ್ದ ಶೋಕಾಸ್ ನೋಟಿಸ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮೈಸೂರು ರೇಸ್ ಕ್ಲಬ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಗೇರಿ ಅವರು ಲೋಕೋಪಯೋಗಿ ಇಲಾಖೆಯು ನ.11ರಂದು ಜಾರಿ ಮಾಡಿರುವ ನೋಟಿಸ್ಗೆ ತಡೆಯಾಜ್ಞೆ ನೀಡಿತು. ಜತೆಗೆ ಸರಕಾರ, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮೈಸೂರಿನ ಕಾರ್ಯನಿರ್ವಾಹಕ ಎಂಜಿನಿಯರ್ಗೆ ನೋಟಿಸ್ ಜಾರಿ ಮಾಡಿತು.
ಈ ಪ್ರಕರಣಕ್ಕೆಡ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಸರಕಾರ ಹಾಗೂ ಲೋಕೋಪಯೋಗಿ ಇಲಾಖೆಗೆ ಕೋರ್ಟ್ ನೋಟಿಸ್ ನೀಡಿದ್ದು, ಹತ್ತು ದಿನಗಳಲ್ಲಿ ಆಕ್ಷೇಪ ಸಲ್ಲಿಸುವಂತೆ ಗಡುವು ವಿಧಿಸಿ ವಿಚಾರಣೆಯನ್ನು ಮುಂದೂಡಿದೆ.
ಗುತ್ತಿಗೆ ಅವಧಿ ಮುಗಿದ ಕಾರಣ ರೇಸಿಂಗ್ ಚಟುವಟಿಕೆ ಸ್ಥಗಿತಗೊಳಿಸಿ ಜಾಗವನ್ನು ತೆರವು ಮಾಡುವಂತೆ ಲೋಕೋಪಯೋಗಿ ಇಲಾಖೆಯು ಕ್ಲಬ್ಗೆ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಕ್ಲಬ್ ಹೈಕೋರ್ಟ್ ಮೆಟ್ಟಿಲೇರಿತ್ತು.