ದೇಶಪ್ರಮುಖ ಸುದ್ದಿ

ನಕ್ಸಲರು, ಭದ್ರತಾ ಸಿಬ್ಬಂದಿಗಳ ನಡುವೆ ಗುಂಡಿನ ಚಕಮಕಿ: 12 ಮಂದಿ ನಕ್ಸಲರ ಸಾವು

ಬಿಜಾಪುರ್,ಮಾ.2-ಛತ್ತೀಸ್ ಘಡದಲ್ಲಿ ಶುಕ್ರವಾರ ಮುಂಜಾನೆ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋ ನಾಯಕ ಹರಿಭೂಷಣ್  ಸೇರಿದಂತೆ 12 ನಕ್ಸಲರು ಮೃತಪಟ್ಟಿದ್ದಾರೆ.

ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಪೂಜಾರಿ ಕಂಕರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಗಳು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಅದರಂತೆ ಇಂದು ನಡೆದ ಗುಂಡಿನ ಚಕಮಕಿಯಲ್ಲಿ 12 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಹಲವು ಭದ್ರತಾ ಸಿಬ್ಬಂದಿಗಳಿಗೆ ಗಾಯಾಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗಿರುವ ನಕ್ಸಲರಿಗಾಗಿ ಭದ್ರತಾ ಸಿಬ್ಬಂದಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. (ವರದಿ-ಎಂ.ಎನ್)

Leave a Reply

comments

Related Articles

error: