ಮೈಸೂರು

ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಾನವೀಯ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಬೇಕು : ಪಿಎಸ್‍ಐ ಎನ್.ಆನಂದ್

ಮೈಸೂರು,ಮಾ.2:- ಪೋಷಕರು ತಮ್ಮ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಮಾನವೀಯ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಬೇಕೆಂದು ತಿ.ನರಸೀಪುರ ಪೊಲೀಸ್ ಠಾಣೆಯ ಪಿಎಸ್‍ಐ ಎನ್.ಆನಂದ್ ಹೇಳಿದರು.

ತಿ.ನರಸೀಪುರ ಪಟ್ಟಣದ ವಾಲ್ಮೀಕಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆದ 10 ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಮಕ್ಕಳು ಮಾನವೀಯ ಮೌಲ್ಯಗಳ ಕುರಿತು ಆಸಕ್ತಿ ಕಳೆದುಕೊಳ್ಳುತ್ತಿದ್ದು, ಸಂಬಂಧಗಳು ಕೂಡ ಗಟ್ಟಿತನವನ್ನು ಕಳೆದುಕೊಳ್ಳುತ್ತಿವೆ. ಹಾಗಾಗಿ ಪೋಷಕರು, ಶಾಲಾ ಶಿಕ್ಷಕ ವರ್ಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಾನವೀಯ ಮೌಲ್ಯಗಳ ಕುರಿತು ನೀತಿ ಪಾಠ ಭೋದಿಸಿ ಮಕ್ಕಳನ್ನು ಪ್ರಜ್ಞಾವಂತರನ್ನಾಗಿ ಮಾಡಬೇಕು ಎಂದರು.

ಜಿ.ಪಂ ಸದಸ್ಯ ಟಿ.ಎಚ್.ಮಂಜುನಾಥ್ ಮಾತನಾಡಿ, ಇಂದಿನ ಸ್ಪಧಾತ್ಮಕ ಯುಗದಲ್ಲಿ ಮಕ್ಕಳು ಅತಿ ಚುರುಕತನವನ್ನು ಹೊಂದಿದ್ದು, ಮಕ್ಕಳು ಆಸಕ್ತಿ ಹೊಂದಿರುವ ಕ್ಷೇತ್ರಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಅವರ ಶ್ರೇಯೋಭಿವೃದ್ದಿಗೆ ಶ್ರಮಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪಿಎಸ್‍ಐ ಅವರನ್ನು ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಮಕ್ಕಳು ವಿವಿಧ ರೀತಿಯ ನೃತ್ಯ, ನಾಟಕವನ್ನು ಪ್ರದರ್ಶಿಸುವ ಮೂಲಕ ನೋಡುಗರನ್ನು ರಂಜಿಸಿದರು. ಕ್ರೀಡೆಯಲ್ಲಿ ಗೆಲುವು ಸಾಧಿಸಿದ ಪೋಷಕರು, ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ವಾಲ್ಮೀಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೊನ್ನನಾಯ್ಕ, ಗೌರವರ ಅಧ್ಯಕ್ಷ ಮಹದೇವಯ್ಯ, ಖಜಾಂಚಿ ಪಿ.ಶಶಿಧರ್, ಕಾರ್ಯದರ್ಶಿ ಆಲಗೂಡು ನಾಗರಾಜು, ನಿರ್ದೇಶಕರಾ ವಿಜಯಲಕ್ಷ್ಮಮ್ಮ, ಮಹದೇವಯ್ಯ, ಪಿ.ಬಸವರಾಜು, ಮರಡಿಪುರ ನಾಗರಾಜು, ಮುಖ್ಯಶಿಕ್ಷಕಿ ಮಂಜುಳಾ, ಸಹ ಶಿಕ್ಷಕರಾದ ದೀಪಾ, ನಂದಿನಿ, ಪುಷ್ಪಾ, ಉಮಾ, ಇತರರು ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: