ಮೈಸೂರು

ಪಾದಚಾರಿಯ ಮೊಬೈಲ್ ಕಸಿದು ಪರಾರಿ

ಮೈಸೂರು,ಮಾ.3:- ಪಾದಚಾರಿಯೋರ್ವರ ಕೈಯ್ಯಲ್ಲಿದ್ದ ಮೊಬೈಲ್ ನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಗರಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಬಿ.ಎನ್.ರಸ್ತೆಯ ಆರ್ಟಿಕಲ್ಚರ್ ಕಛೇರಿಯ ಮುಂಭಾಗ ನಜರ್ ಬಾದ್ ನಿವಾಸಿ ಸಂತೋಷ್ ಎಂಬವರು ಮೊಬೈಲ್ ನಲ್ಲಿ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಈ ಕುರಿತು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: