ಮೈಸೂರು

ಯಶಸ್ವಿಯಾಗಿ ನಡೆದ ಉಚಿತ ನೇತ್ರ ತಪಾಸಣೆ

ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಭೀಮ ಸ್ವಸ್ಥ ಯೋಜನೆ ಮತ್ತು ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಬೆಂಗಳೂರಿನ ಭಗವಾನ್ ಮಹಾವೀರ ಜೈನ್ ಸಂಯುಕ್ತಾಶ್ರಯದಲ್ಲಿ ನಡೆದ ಶಿಬಿರವನ್ನು ನೇತ್ರ ತಜ್ಞ ಡಾ.ಗೋವಿಂದೆ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನೇತ್ರ ಸಂರಕ್ಷಣೆ ಹಾಗೂ ಅದರ ಕುರಿತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಿಳಿಸಿದರು. ಸುಮಾರು 60ಕ್ಕೂ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು. ಅದರಲ್ಲಿ ಇಬ್ಬರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಶಿಬಿರ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭ ಹೊನ್ನೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹೆಚ್.ಎಂ.ಪುಟ್ಟಮಲ್ಲಪ್ಪ, ಸಿಇಓ ಎಂ.ರಾಜಶೇಖರ, ಉಪಾಧ್ಯಕ್ಷ ಎಂ.ನಂಜುಂಡಯ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: