ಸುದ್ದಿ ಸಂಕ್ಷಿಪ್ತ

ಮಾ.6 :ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲಾ ಪಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ ಮಾ.3 :- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲಾ ಪಶಸ್ತಿ ಪ್ರದಾನ ಹಾಗೂ ಹಸಿರು ನನಸಾದ ಕನಸು ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 6 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಿ.ದೇವರಾಜ ಅರಸು ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಪಿ.ಐಶ್ರೀವಿದ್ಯಾ ಅವರು ನೆರವೇರಿಸಲಿದ್ದಾರೆ. ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಹಸಿರು ನನಸಾದ ಕನಸು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.

ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ಲಿಂಗರಾಜು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹಿರಿಯ ಪರಿಸರ ಅಧಿಕಾರಿಯಾದ ಎ.ಉದಯಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ವಾಲ್ಟರ್ ಹಿಲೇರಿ ಡಿಮೆಲ್ಲೊ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಅಧ್ಯಕ್ಷರಾದ ಫಿಲಿಪ್‍ವಾಸ್, ಜಿಲ್ಲಾ ಸ್ಕೌಟ್ಸ್ ಮತ್ತ ಗೈಡ್ಸ್ ಸಂಸ್ಥೆ ಉಪಾಧ್ಯಕ್ಷರಾದ ಕೆ.ಟಿ.ಬೇಬಿ ಮ್ಯಾಥ್ಯೂ ಇತರರು ಪಾಲ್ಗೊಳ್ಳಲಿದ್ದಾರೆ.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: