ಸುದ್ದಿ ಸಂಕ್ಷಿಪ್ತ

ಮಾರ್ಚ್ 5 :  ಶ್ರೀ ರಾಮಕೃಷ್ಣ ಪರಮಹಂಸ ವೃತ್ತ ಉದ್ಘಾಟನೆ ಮತ್ತು ಪ್ರತಿಮೆ ಅನಾವರಣ

ಮೈಸೂರು, ಮಾ.3:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ರಾಮಕೃಷ್ಣ ಪರಮಹಂಸ ವೃತ್ತ ಉದ್ಘಾಟನೆ ಮತ್ತು ಪ್ರತಿಮೆ ಅನಾವರಣ ಕಾರ್ಯಕ್ರಮ ಮಾರ್ಚ್ 5 ರಂದು ಸಂಜೆ 7 ಗಂಟೆಗೆ ರಾಮಕೃಷ್ಣನಗರದ ದಟ್ಟಗಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಜಿ.ಟಿ.ದೇವೇಗೌಡ ಅವರು ಅಧ್ಯಕ್ಷತೆ ವಹಿಸುವರು. ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಆತ್ಮ ಜ್ಞಾನನಂದಾಜಿ ಮಹಾರಾಜ್ ಹಾಗೂ ಶ್ರೀ ಜಿತಕಾಮನಂದಾಜಿ ಮಹಾರಾಜ್ ಅವರುಗಳು ದಿವ್ಯಸಾನಿಧ್ಯ ವಹಿಸುವರು. ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಹಾಗೂ ಹಜ್ ಸಚಿವ ರೋಷನ್ ಬೇಗ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ತನ್ವೀರ್ ಸೇಠ್, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಭಾಗ್ಯವತಿ, ಕರ್ನಾಟಕ ವಿಧಾನ ಪರಿಷತ್‍ನ ಉಪಸಭಾಪತಿ ಮರಿತಿಬ್ಬೆಗೌಡ, ಜಿಲ್ಲಾಪಂಚಾಯತ್‍ನ ಅಧ್ಯಕ್ಷರಾದ ನಯೀಮಾಸುಲ್ತಾನ್ ನಜೀರ್ ಅಹಮದ್,ಲೋಕಸಭಾ ಸದಸ್ಯರುಗಳಾದ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಹೆಚ್.ಪಿ. ಮಂಜುನಾಥ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಕೆ. ವೆಂಕಟೇಶ್, ರೇಷ್ಮೆ ಉದ್ದಿಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ. ಸೋಮಶೇಖರ್, ವಾಸು, ಸಾ.ರಾ. ಮಹೇಶ್, ಕಳಲೆ ಎನ್. ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯ ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ. ನಾರಾಯಣ ಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ. ಧ್ರುವಕುಮಾರ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಗೆ ವೀರೇಶ್, ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್ ಎನ್., ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮು, ಮೈಸೂರು ಮಹಾನಗರ ಪಾಲಿಕೆ ಉಪಮಹಾಪೌರರಾದ ಎಂ.ಇಂದಿರಾ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಿ. ನಟರಾಜು ಹಾಗೂ ಇನ್ನಿತರ ಗಣ್ಯರು ಭಾಗವಹಿಸುವರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: