ಮೈಸೂರು

ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿ : ಸವಾರ ಸಾವು

ಮೈಸೂರು,ಮಾ.6:- ಬೈಕೊಂದಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವಿಜಯನಗರ ಬಳಿ ನಡೆದಿದೆ.

ಮೃತರನ್ನು ಸಿದ್ದಾರ್ಥ ಬಡಾವಣೆಯ ನಿವಾಸಿ ಎಂ.ಜೆ.ನಾಗೇಶ್ವರ ಮೂರ್ತಿ ಎಂದು ಗುರುತಿಸಲಾಗಿದೆ. ಇವರು ಆನ್ ಲೈನ್ ಮೂಲಕ ಬರುವ ವಸ್ತುಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನ ವ್ಯಕ್ತಿಯೋರ್ವರು ಆನ್ ಲೈನ್ ನಲ್ಲಿ ಬುಕ್ ಮಾಡಿದ್ದ ವಸ್ತುಗಳನ್ನು ತಲುಪಿಸಲು ವಿಜಯನಗರಕ್ಕೆ ತೆರಳುತ್ತಿದ್ದ ವೇಳೆ ರಿಂಗ್ ರಸ್ತೆಯಲ್ಲಿ ಹಿನಕಲ್ ಕಡೆಯಿಂದ ಅತಿವೇಗವಾಗಿ ಬಂದ ಗೂಡ್ಸ್ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಗೇಶ್ವರ ಅವರಿಗೆ ಗಂಭೀರ ಏಟುಗಳಾಗಿತ್ತು. ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ ಸಂಜೆಯ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ವಿವಿ ಪುರಂ ಸಂಚಾರಿ ಠಾಣೆಯ ಇನ್ಸಪೆಕ್ಟರ್ ರಘು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವಿವಿಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೂಡ್ಸ್ ವಾಹನದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: