ಕರ್ನಾಟಕ

ಲೋಕಾಯುಕ್ತರ ಮೇಲೆ ಹಲ್ಲೆ ಪ್ರಕರಣ: ತೇಜ್ ರಾಜ್ ಶರ್ಮಾ ಪೊಲೀಸ್ ಕಸ್ಟಡಿಗೆ

ಬೆಂಗಳೂರು,ಮಾ.8-ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿ ತೇಜ್ ರಾಜ್ ಶರ್ಮಾ ನನ್ನು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಆರೋಪಿ ತೇಜ್ ರಾಜ್ ಶರ್ಮಾ ನನ್ನು ವಿಧಾನ ಸೌಧ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆತನಿಗೆ ಪೊಲೀಸ್ ಕಸ್ಟಡಿ ವಿಧಿಸಿದೆ.

ಬುಧವಾರ ಲೋಕಾಯುಕ್ತ ಕಚೇರಿಗೆ ನುಗ್ಗಿದ್ದ ತೇಜ್ ರಾಜ್ ಶರ್ಮಾ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಮೂರು ಬಾರಿ ಚೂರಿಯಿಂದ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿರುವ ವಿಶ್ವನಾಥ್ ಶೆಟ್ಟಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: