ಮೈಸೂರು

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ಮೈಸೂರು,ಮಾ.8-ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಿಂದೂಸ್ಥಾನ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ನಗರದ ಚಿಕ್ಕಗಡಿಯಾರದ ಮುಂಭಾಗ ಬೀದಿ ನಾಟಕವನ್ನು ಪ್ರದರ್ಶಿಸಿ ಎಲ್ಲರ ಗಮನಸೆಳೆದರು.

ಸಮಾಜದಲ್ಲಿ ಮಹಿಳೆಯ ಸ್ಥಾನಮಾನ ಕುರಿತು ಅರಿವು ಮೂಡಿಸುರುವು, ಮಹಿಳೆ ಮತ್ತು ಮಕ್ಕಳ ರಕ್ಷಣೆ, ಹೆಣ್ಣು ಮಕ್ಕಳ ಶಿಕ್ಷಣ, ಮಹಿಳಾ ಸಬಲೀಕರಣ ಹಾಗೂ ಮಹಿಳಾ ಸಬಲೀಕರಣದಲ್ಲಿ ಮಹಿಳೆಯ ಪಾತ್ರ ಇತ್ಯಾದಿ ವಿಷಯಗಳ ಕುರಿತು ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗಳಿಸಿದರು.

ಹಿಂದೂಸ್ಥಾನ್ ಪ್ರಥಮ ದರ್ಜೆ ಕಾಲೇಜಿನ ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶಿಸಿದರು. ನಂತರ ಮಧ್ಯಾಹ್ನ 1 ಗಂಟೆಗೆ ಅಗ್ರಹಾರ ವೃತ್ತದ ಬಳಿ, ಮಧ್ಯಾಹ್ನ 3 ಗಂಟೆಗೆ ಬಲ್ಲಾಳ್ ವೃತ್ತದ ಬಳಿ ಬೀದಿನಾಟಕವನ್ನು ಪ್ರದರ್ಶಿಸಲಿದ್ದಾರೆ. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: