ದೇಶಪ್ರಮುಖ ಸುದ್ದಿ

ಕಾವೇರಿ ವಿಚಾರ: ನಿತಿನ್ ಗಡ್ಕರಿ ಭೇಟಿ ಮಾಡಿದ ದೇವೇಗೌಡರು

ನವದೆಹಲಿ,ಮಾ.9-ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನೀರು ನಿರ್ವಹಣಾ ಮಂಡಳಿ ರಚಿಸುವ ಮುನ್ನ ರಾಜ್ಯದ ರೈತರ ಮನವಿಯನ್ನು ಆಲಿಸಿ, ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಮೇಕೆದಾಟು ಯೋಜನೆ, ಏತ ನೀರಾವರಿ ಯೋಜನೆ ಮೂಲಕ ನೀರಾವರಿ ಸೌಲಭ್ಯ ಹಾಗೂ ಕಣಿವೆ ಆಚೆಗೂ ನೀರಾವರಿ ಉದ್ದೇಶಕ್ಕೆ ನೀರು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ತಿರುವು ಯೋಜನೆಗೆ ಅವಕಾಶ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನು ಸಚಿವರಿಗೆ ಸಲ್ಲಿಸಿದ್ದಾರೆ. ದೇವೇಗೌಡರ ಮನವಿಗೆ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಕಾವೇರಿ ಜಲ ವಿವಾದದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದರು. ಅಂದೇ ನಿತಿನ್ ಗಡ್ಕರಿ ಅವರನ್ನು ಭೇಟಿ ಆಗಿ ಮನವಿ ಸಲ್ಲಿಸುವುದಾಗಿಯೂ ಭರವಸೆ ನೀಡಿದ್ದರು. (ಎಂ.ಎನ್)

Leave a Reply

comments

Related Articles

error: