ಕರ್ನಾಟಕ

ಮಾ.13 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮಂಡ್ಯ (ಮಾ.9): ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇವರ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮವನ್ನು ಮಾರ್ಚ್ 13 ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: