ಮೈಸೂರು

ಕ್ರೀಡೆಯಿಂದ ಉತ್ತಮ ಆರೋಗ್ಯ: ರಾಜೀವ್

ಕ್ರೀಡೆಯಿಂದ ಉತ್ತಮ ಆರೋಗ್ಯ ಬೆಳೆಸಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಉಪಾಧ್ಯಕ್ಷ  ಹೆಚ್.ವಿ. ರಾಜೀವ್ ಹೇಳಿದರು.

ಮೈಸೂರಿನ ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ ಶನಿವಾರ ಪ್ಯಾಲೇಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ  ನಗರ ಮಟ್ಟದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾವಳಿ 2016ನ್ನು ರಾಜೀವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸಬೇಕು. ಪೋಷಕರು ತಮ್ಮ ಮಕ್ಕಳಿಗೆ ಓದಿನಲ್ಲಿ ಯಶಸ್ಸನ್ನು ಗಳಿಸಲು ತಿಳಿಸಿದರೆ ಸಾಲದು ಅವರಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಲು ತಿಳಿಸಬೇಕು ಎಂದರು. ಮಕ್ಕಳು ವಿದ್ಯಾಭ್ಯಾಸದ ಜೊತೆ ಕ್ರೀಡೆಯಲ್ಲೂ ಪಾಲ್ಗೊಂಡರೆ ಅವರಿಗೆ ಉನ್ನತ ಶಿಕ್ಷಣಕ್ಕಾಗಿ ಸೀಟುಗಳನ್ನು ಕಾಯ್ದಿರಿಸಲಾಗುತ್ತದೆ. ಅಷ್ಟೇ ಅಲ್ಲ ಅವರಿಗೆ ಉದ್ಯೋಗದಲ್ಲಿಯೂ ಕ್ರೀಡಾ ಖೋಟಾದಡಿ ಉದ್ಯೋಗ ಲಭಿಸಲಿದೆ. ಇಂತಹ ಅವಕಾಶವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಸ್ನೇಕ್ ಶ್ಯಾಂ, ಕೆ. ಬಾಲಸುಬ್ರಹ್ಮಣ್ಯಂ, ಪ್ಯಾಲೇಸ್ ಸ್ಪೋರ್ಟ್ಸ್ ಕ್ಲಬ್ ನ ಉಪಾಧ್ಯಕ್ಷ ರಮೇಶ್ ಎಂ.ಎನ್, ರಾಷ್ಟ್ರೀಯ ವಾಲಿಬಾಲ್ ಆಟಗಾರ ಅರುಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪಂದ್ಯಾವಳಿಯಲ್ಲಿ ಸುಮಾರು 40 ತಂಡಗಳು ಭಾಗವಹಿಸಿವೆ.

Leave a Reply

comments

Related Articles

error: