ಸುದ್ದಿ ಸಂಕ್ಷಿಪ್ತ

ಇಂದು ಪೊಲೀಸ್ ಆಯುಕ್ತರ ಕಚೇರಿ ಉದ್ಘಾಟನೆ

ಮೈಸೂರು, ಮಾ.10:- ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ (ನಿ) ಇವರ ವತಿಯಿಂದ ನೂತನವಾಗಿ ನಿರ್ಮಿಸಿರುವ ಮೈಸೂರು ನಗರ ಪೊಲೀಸ್ ಆಯುಕ್ತರರವ ಕಚೇರಿ, ಉಪ ಪೊಲೀಸ್ ಆಯುಕ್ತರು, ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿ ಹಾಗೂ ಒಳಾಂಗಣ ಫೈರಿಂಗ್ ರೇಂಜ್ ಮತ್ತು ಸ್ಪೋಟ್ಸ್ ಕ್ಲಬ್‍ನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 10 ರಂದು ಸಂಜೆ 6 ಗಂಟೆಗೆ ನಜರ್‍ಬಾದ್ ಪೊಲೀಸ್ ಆಯುಕ್ತರವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ರೇಷ್ಮೆ ಉದ್ದಿಮಗಳ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸುವರು. ಗೃಹ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ತನ್ವೀರ್ ಸೇಠ್, ಕರ್ನಾಟಕ ವಿಧಾನ ಪರಿಷತ್‍ನ ಉಪಸಭಾಪತಿ ಮರಿತಿಬ್ಬೆಗೌಡ, ಗೃಹಮಂತ್ರಿಗಳ ಸಲಹೆಗಾರರಾದ ಕೆಂಪಯ್ಯ, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಭಾಗ್ಯವತಿ, ಜಿಲ್ಲಾಪಂಚಾಯತ್‍ನ ಅಧ್ಯಕ್ಷರಾದ ನಯೀಮಾ ಸುಲ್ತಾನ್ ನಜೀರ್ ಅಹಮದ್, ಲೋಕಸಭಾ ಸದಸ್ಯರುಗಳಾದ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಶಾಸಕರಾದ ವಾಸು, ಜಿ.ಟಿ.ದೇವೇಗೌಡ,  ವಿಧಾನ ಪರಿಷತ್ ಸದಸ್ಯ ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ. ನಾರಾಯಣ ಸ್ವಾಮಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ. ಧ್ರುವಕುಮಾರ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಹೆಚ್.ಎ. ವೆಂಕಟೇಶ್, ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಆದ್ಯಕ್ಷ ಎನ್. ನಂದಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ. ಸಿದ್ದರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಗೆ ವೀರೇಶ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮು, ಮಹಾನಗರ ಪಾಲಿಕೆ ಸದಸ್ಯೆ ಶಿವಮ್ಮ, ಡಿ.ಜಿ. ಮತ್ತು ಐ.ಜಿ.ಪಿ ನೀಲಮಣಿ ಎನ್.ರಾಜು, ಡಿ.ಜಿ.ಪಿ ಕಿಶೋರ್ ಚಂದ್ರ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: