
ಮೈಸೂರು
ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು
ಪ್ರಿಯಕರನ ವರ್ತನೆಯಿಂದ ಮನನೊಂದು ತನ್ನ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವತಿ ಶುಕ್ರವಾರ ಮೃತಪಟ್ಟಿದ್ದಾರೆ.
ಮೈಸೂರು ಹೊರವಲಯದ ಬೆಳವಾಡಿ ಕೈಗಾರಿಕಾ ಪ್ರದೇಶದ ನಿವಾಸಿ ರಂಗಸ್ವಾಮಿ ಎಂಬವರ ಪುತ್ರಿ ಅನಿತಾ(19) ಮೃತಪಟ್ಟವರು. ಗಾರ್ಮೆಂಟ್ಸ್`ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅನಿತಾ, ಅಲ್ಲೇ ಕೆಲಸ ಮಾಡುತ್ತಿದ್ದ ರವಿ ಎಂಬಾತನನ್ನು ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯವರು ವಿರೋಧಿಸಿದ್ದರಿಂದ ಕಳೆದ ಒಂದೂವರೆ ತಿಂಗಳಿನಿಂದ ಪ್ರಿಯಕರ ರವಿ ಮನೆಯಲ್ಲೇ ಅನಿತಾ ವಾಸವಿದ್ದರು.
ಈ ಸಂದರ್ಭದಲ್ಲಿ ಅನಿತಾ ಮೇಲೆ ರವಿ ಅನುಮಾನಪಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಮನನೊಂದ ಆಕೆ ಮಂಗಳವಾರ ಸೀಮೆಎಣ್ಣೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ವಿಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.