ಪ್ರಮುಖ ಸುದ್ದಿಮೈಸೂರು

ಪಾದರಸದಂತೆ ಓಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಮೈಸೂರು,ಮಾ.10:- ಎರಡನೇ ದಿನದ ತವರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾದರಸದಂತೆ ಓಡಾಡುತ್ತಿದ್ದಾರೆ. ಒಂದು ನಿಮಿಷವನ್ನೂ ವ್ಯರ್ಥ ಮಾಡದೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಮೈಸೂರಿನ ತಮ್ಮ ನಿವಾಸದ ಎದುರು ಮಾಧ್ಯಮ ಪ್ರತಿನಿಧಿಗಳ ಜೊತೆ ಸುದೀರ್ಘವಾಗಿ ಮಾತನಾಡಿ ಹೊರಟ ಸಿಎಂ, ಮೊದಲಿಗೆ  ಕೆ.ಪಿ.ಟಿ‌. ಸಿ‌.ಎಲ್. ವತಿಯಿಂದ ಕುಕ್ಕರಹಳ್ಳಿಯಲ್ಲಿ ನಿರ್ಮಿಸಿರುವ ಜಿಐಎಸ್ ಸಬ್ ಸ್ಟೇಷನ್ ಉದ್ಘಾಟಿಸಿದರು. ಬಳಿಕ ರಾಮಸ್ವಾಮಿ ವೃತ್ತದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ನಂತರ, ಲಲಿತಾದ್ರಿಪುರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಾಟರಿ ಮೂಲಕ ಚೀಟಿ ಎತ್ತಿ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಿದರು. ನಂತರ ವೇದಿಕೆ ಕಾರ್ಯಕ್ರಮ ಮುಗಿಸಿ ಜರ್ಮನ್ ಪ್ರೆಸ್ ಅವರಣದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಹಾಗೂ ಇತರ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ  ಜರ್ಮನ್ ಪ್ರೆಸ್ ಆವರಣದಲ್ಲಿ ರಸ್ತೆ ಅಭಿವೃದ್ಧಿ ಗೆ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ  ಬನ್ನೂರು ರಸ್ತೆಯಲ್ಲಿರುವ  ದೇವೇಗೌಡ ವೃತ್ತಕ್ಕೆ ಆಗಮಿಸಿ, ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿಮಹದೇವಪ್ಪ, ಸಚಿವರಾದ ತನ್ವೀರ್ ಸೇಠ್, ರೋಷನ್ ಬೇಗ್, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್, ಸಂಸದ ಧ್ರುವ ನಾರಾಯಣ, ಶಾಸಕ ಎಂ.ಕೆ.ಸೋಮಶೇಖರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಪಾಲಿಕೆಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: