ಮೈಸೂರು

ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ: ಜಿಲ್ಲಾಧಿಕಾರಿ

ಸಮಾಜದಲ್ಲಿ ವಿಚೇತನರು ಇತರರಂತೆ ಸಮಾನತೆಯಿಂದ ಬಾಳುವುದಕ್ಕೆ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳಿವೆ ಎಂದು ಜಿಲ್ಲಾಧಿಕಾರಿ ರಂದೀಪ್ ಹೇಳಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಚೇತನ ಮತ್ತು ಹಿರಿಯ ನಾಗಾರಿಕರ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಶನಿವಾರದಂದು ವಿಚೇತನರಿಗೆ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಚೇತನರ ಆತ್ಮವಿಶ್ವಾಸವನ್ನು ಹೆಚ್ಚಿಸುವ ಮತ್ತು ಅವರ ಜೀವನ ಮಟ್ಟವನ್ನು ಸುಧಾರಿಸುವ ಹಿನ್ನೆಲೆಯಲ್ಲಿ ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ವಿಶ್ವ ವಿಚೇತನರ ದಿನದ ಅಂಗವಾಗಿ ವಿಚೇತನರಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಅಭಿವ್ಯಕ್ತಗೊಳಿಸಬೇಕೆಂದರು.

ವಿಚೇತನರಲ್ಲಿ ವಿಶ್ವಾಸ ತುಂಬಿಸುವ ನಿಟ್ಟಿನಲ್ಲಿ ಡಿಸೆಂಬರ್ 3ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ವಿಶ್ವ ವಿಚೇತನರ ದಿನವನ್ನು ಆಚರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಕೆ. ರಾಧಾ, ಕಾರ್ಯಕ್ರಮದ ಅಧಿಕಾರಿ ನಾಗೇಶ್, ಶ್ರೀಧರ್ ದೀಕ್ಷಿತ್ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

comments

Related Articles

error: