ಮೈಸೂರು

ಮಳಿಗೆ ಮೇಲೆ ಮನಪಾ ಅಧಿಕಾರಿಗಳ ದಾಳಿ : ಟನ್ ಗೂ ಅಧಿಕ ಪ್ಲಾಸ್ಟಿಕ್ ವಶ

ಮೈಸೂರು,ಮಾ.12:- ಮಹಾನಗರ ಪಾಲಿಕೆ ಅಧಿಕಾರಿಗಳು ಪ್ಲಾಸ್ಟಿಕ್ ವಿರುದ್ಧ ಸಮರ ಸಾರಿದ್ದು, ಮತ್ತೆ ಮಳಿಗೆಗಳ ಮೇಲಿನ ತಮ್ಮ ದಾಳಿಯನ್ನು ಮುಂದುವರಿಸಿದ್ದಾರೆ.

ಇಂದು ಪಾಲಿಕೆಯ ಆಯುಕ್ತ ಜಿ.ಜಗದೀಶ್ ನೇತೃತ್ವದಲ್ಲಿ ಸಂತೆಪೇಟೆಯ ಮೂರನೇ ಕ್ರಾಸ್ ಕೌಸಲ್ಯ ಕಾಂಪ್ಲೆಕ್ಸ್ ನಲ್ಲಿ ಸಂಗ್ರಹಿಸಿಡಲಾದ ಒಂದು ಟನ್ ಗೂ ಅಧಿಕ ಪ್ಲಾಸ್ಟಿಕ್  ಕವರ್ ಗಳನ್ನು  ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ನಿಷೇಧಿಸಿ ತಿಂಗಳುಗಳೇ ಕಳೆದಿದ್ದರೂ, ಮಳಿಗೆಗಳ ಮಾಲಿಕರಿಗೆ ಪ್ಲಾಸ್ಟಿಕ್ ಬಳಸದಂತೆ ಎಚ್ಚರಿಕೆ ನೀಡಿದ್ದರೂ ನಿರ್ಲಕ್ಷ್ಯಿಸಿ ದಾಸ್ತಾನಿರಿಸಿಕೊಂಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ. ದಾಳಿಯಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ಸೇರಿದಂತೆ ಹಲವರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: