ಕರ್ನಾಟಕಪ್ರಮುಖ ಸುದ್ದಿಮೈಸೂರು

ಭಾರತ ಬಂದ್ ಗೆ ಸರ್ಕಾರದ ಬೆಂಬಲವಿಲ್ಲ ಗೃಹಸಚಿವರ ಸ್ಪಷ್ಟನೆ

ಕಾಂಗ್ರೆಸ್ ಮಿತ್ರ ಪಕ್ಷಗಳು ನವೆಂಬರ್ 28ರಂದು ಕರೆ ನೀಡಿರುವ ಭಾರತ್ ಬಂದ್ ಗೆ ರಾಜ್ಯ ಸರ್ಕಾರದಿಂದ ಬೆಂಬಲವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮೈಸೂರಿಗೆ ಶನಿವಾರ ಆಗಮಿಸಿದ ಡಾ. ಜಿ.ಪರಮೇಶ್ವರ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಕೆಲವರು ಬಂದ್ ಗೆ ಕರೆ ನೀಡಿದ್ದಾರೆ. ಆದರೆ ಈ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷವೇ ಬೇರೆ, ಸರ್ಕಾರವೇ ಬೇರೆ ಎಂದರು.  ಪ್ರತಿಭಟನೆ ನಡೆಸುವವರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟು ಮಾಡಬಾರದು.  ಕಾನೂನು ವಿರೋಧಿ ಕ್ರಮ ಕೈಗೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ನ ಕೆಲವು ಮುಖಂಡರು ಸಚಿವರ ಜೊತೆಗಿದ್ದರು.

Leave a Reply

comments

Related Articles

error: