ಮೈಸೂರು

ಮನೆ ಬೀಗ ಮುರಿದು 2.5ಲಕ್ಷರೂ ಚಿನ್ನಾಭರಣ ದೋಚಿದ ಕಳ್ಳರು

ಮೈಸೂರು,ಮಾ.12:- ಮನೆ ಬೀಗ ಮುರಿದು ಮನೆಗೆ ನುಗ್ಗಿದ ಕಳ್ಳರು  2.5ರೂ. ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿದ ಘಟನೆ ಎನ್.ಆರ್.ಮೊಹಲ್ಲಾದ ಕಲ್ಪವೃಕ್ಷ ನಗರದಲ್ಲಿ ನಡೆದಿದೆ.

ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಮೋಸೆಸ್ ಶೇಖರ್ ಎಂಬುವರಿಗೆ ಸೇರಿದ ಮನೆಗೆ ನುಗ್ಗಿದ ಕಳ್ಳರು ಮೋಸೆಸ್ ಶೇಖರ್ ಬೆಂಗಳೂರಿಗೆ ತೆರಳಿದ್ದ ವೇಳೆ ತಮ್ಮ ಕೈಚಳಕ ತೋರಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಎನ್.ಆರ್.ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: