ಮೈಸೂರು

ಮನೆಬಾಗಿಲು ಮುರಿದು ಚಿನ್ನಾಭರಣ ಲೂಟಿ

ಮೈಸೂರು,ಮಾ.13:- ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 150ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.

ದಟ್ಟಗಳ್ಳಿಯಲ್ಲಿ ಟೈಲರ್ ವೃತ್ತಿ ನಡೆಸುತ್ತಿರುವ ಹೇಮಲತಾ ಎಂಬುವರಿಗೆ ಸೇರಿದ ಶಕ್ತಿಗಣಪತಿ ದೇವಾಲಯದ ಬಳಿ ಇರುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 150ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕುವೆಂಪುನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: