ಸುದ್ದಿ ಸಂಕ್ಷಿಪ್ತ
ವಾಹನ ಡಿಕ್ಕಿ : ಚಿರತೆ ಸಾವು
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ನಡೆದಿದೆ.
ಸುಮಾರು ಮೂರು ವರ್ಷಪ್ರಾಯದ ಗಂಡು ಚಿರತೆ ಸಾವನ್ನಪ್ಪಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.
ಶುಕ್ರವಾರ ತಡರಾತ್ರಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.