ಮೈಸೂರು

ವಿಷಪೂರಿತ ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಮೈಸೂರು,ಮಾ.13:- ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷಪೂರಿತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ವಾಟಾಳು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ನಾಗನಾಯಕ (35)ಎಂದು ಗುರುತಿಸಲಾಗಿದ್ದು, ಆಟೋ ಡ್ರೈವರ್ ಆಗಿರುವ ನಾಗನಾಯಕ ನಿನ್ನೆ ಮಾತ್ರೆ ಸೇವಿಸಿ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: