ಸುದ್ದಿ ಸಂಕ್ಷಿಪ್ತ

ಮಾ.18ಕ್ಕೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಸೋಮವಾರಪೇಟೆ,ಮಾ.13-ಸಮೀಪದ ತಣ್ಣೀರುಹಳ್ಳ ಗ್ರಾಮದಲ್ಲಿ ಶ್ರೀ ಬಸವೇಶ್ವರ ಯುವಕ ಸಂಘದ 45ನೇ ವರ್ಷದ ವಾರ್ಷಿಕೋತ್ಸವ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ರಾಜ್ಯಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮಾ.18 ರಂದು ನಡೆಯುವುದೆಂದು ಸಂಘದ ಕಾರ್ಯದರ್ಶಿ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಸಂಜೆ 6 ಗಂಟೆಗೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುವ ಕ್ರೀಡಾಕೂಟವನ್ನು ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷರಾದ ನಾಪಂಡ ಮುತ್ತಪ್ಪ, ಶಾಸಕ ಅಪ್ಪಚ್ಚು ರಂಜನ್, ಮಾಜಿ ಸಚಿವ ಬಿ.ಎ. ಜೀವಿಜಯ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಎಂ. ವಿಜಯ, ಉದ್ಯಮಿ ಹರಪಳ್ಳಿ ರವೀಂದ್ರ, ಮಲ್ಲೇಶ್‍ಗೌಡ, ಗಿರೀಶ್ ಮಲ್ಲಪ್ಪ, ಅರುಣ್‍ಕಾಳಪ್ಪ, ಮಧು ಶಂಕರ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ವಹಿಸಲಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: