ಕರ್ನಾಟಕ

ತಾಲ್ಲೂಕು ಅಧ್ಯಕ್ಷರಾಗಿ ಬಿ.ರಾಮು ಆಯ್ಕೆ

ಸೋಮವಾರಪೇಟೆ,ಮಾ.13-ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷರನ್ನಾಗಿ ಬಿ. ರಾಮು ಅವರನ್ನು ಆಯ್ಕೆ ಮಾಡಲಾಯಿತು.

ಇಲ್ಲಿನ ಪತ್ರಿಕಾ ಭವನ ಸಭಾಂಗಣದಲ್ಲಿ ಸಮಾಜದ ಜಿಲ್ಲಾ ಉಪಾಧ್ಯಕ್ಷರಾದ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಸೇವಾ ಸಂಘದ ತಾಲೂಕು ಗೌರವಾಧ್ಯಕ್ಷರಾಗಿ ತನಿಯಪ್ಪ, ಉಪಾಧ್ಯಕ್ಷರನ್ನಾಗಿ ಜರ್ಮಿ, ಕಾರ್ಯದರ್ಶಿಯಾಗಿ ಮಹೇಶ್, ಖಜಾಂಚಿಯಾಗಿ ವೆಂಕಪ್ಪ ಅವರುಗಳನ್ನು ನೇಮಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಜನಾರ್ಧನ್, ವೀರಾಜಪೇಟೆ ತಾಲೂಕು ಕಾರ್ಯದರ್ಶಿ ಜಗನ್ನಾಥ್, ಹೊಸತೋಟ ವಲಯ ಅಧ್ಯಕ್ಷ ದುಶ್ಯಂತ್‍ಕುಮಾರ್ ಸೇರಿದಂತೆ ಇತರರು ಇದ್ದರು. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: