ಮೈಸೂರು

ಎರಡು ವರ್ಷ ಕಳೆದರೂ ಪೂರ್ಣಗೊಳ್ಳದ ಗನ್ ಹೌಸ್ ರಸ್ತೆ ಕಾಮಗಾರಿ : ವಾಹನ ಸವಾರರ ಹಿಡಿಶಾಪ

ಮೈಸೂರು,ಮಾ.14:- ಗನ್ ಹೌಸ್ ರಸ್ತೆ ಕಾಮಗಾರಿ ಇನ್ನೂ, ಪೂರ್ಣಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವರ್ಷದಿಂದ ರಸ್ತೆ ಕಾಮಗಾರಿ ನಡೆಯುತ್ತಿದೆ. ಅದರಿಂದ ಚಾಮರಾಜನಗರ ಭಾಗದ ವಾಹನಗಳು ರೇಸ್ ಕೋರ್ಸ್ ಮೂಲಕ ಸಬರ್ಬ್ ಬಸ್ ನಿಲ್ದಾಣಕ್ಕೆ ತೆರಳಬೇಕಾಗಿದೆ. ಗನ್ ಹೌಸ್ ರಸ್ತೆ ಎರಡು ವರ್ಷಗಳಿಂದ ವಾಹನ ಸಂಚಾರಕ್ಕೆ ಸ್ಥಗಿತಗೊಂಡಿದೆ. ಸಾಕಷ್ಟು ಕಾರಣಗಳಿಂದ ರಸ್ತೆ ಕಾಮಗಾರಿ ವಿಳಂಬವಾಗುತ್ತಿದೆ. ಎರಡು ದಸರಾ ಕಳೆದರೂ ರಸ್ತೆ ಪೂರ್ಣಗೊಳಿಸುವ  ಕಾಮಗಾರಿಗೆ  ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಲೋಕೋಪಯೋಗಿ ಸಚಿವರಾಗಿರುವ ಡಾ.ಹೆಚ್.ಸಿ.ಮಹದೇವಪ್ಪನವರು ಚುನಾವಣೆ ಸಮೀಪಿಸುತ್ತಿರುವುದರಿಂದ ಚುನಾವಣಾ ಪ್ರಚಾರ ಕಾರ್ಯ, ಸಾಧನಾ ಸಮಾವೇಶ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವುದರಲ್ಲಿಯೇ ಬ್ಯುಸಿಯಾಗಿದ್ದಾರೆ. ಮಂದಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿಗೆ ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದಾರೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸೋ ಗನ್ ಹೌಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ವಾಹನ ಸವಾರರಿಗೆ ತೊಂದರೆಯುಂಟಾಗುತ್ತಿದೆ. ಕಾಮಗಾರಿ ಮುಗಿಯಲು ಇನ್ನೆಷ್ಟು ವರ್ಷ ಬೇಕು ಎಂದು ಸಾರ್ವಜನಿಕರು, ವಾಹನ ಸವಾರರು ಪ್ರಶ್ನಿಸುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: