ಮೈಸೂರು

ಅಪರಿಚಿತ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಮೈಸೂರು,ಮಾ.14:- ಅಪರಿಚಿತ ವ್ಯಕ್ತಿಯ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆಗೈದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕರಿಗಳ ಕೆರೆ ಬಳಿ ನಡೆದಿದೆ.

ಘಟನೆ ನಿನ್ನೆ ತಡರಾತ್ರಿ ನಡೆದಿರಬೇಕೆಂದು ಶಂಕಿಸಲಾಗಿದ್ದು, ಇಂದು ಬೆಳಿಗ್ಗೆ ದಾರಿಹೋಕರು ಗಮನಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ವ್ಯಕ್ತಿಯ ಕುರಿತ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: