ಮೈಸೂರು

ದೇಶದ ಬೆಳವಣಿಗೆಗೆ ಶೈಕ್ಷಣಿಕ ಪ್ರಗತಿ ಅಗತ್ಯ : ಧೃವನಾರಾಯಣ

josef-web-2ದೇಶದ ಸರ್ವತೋಮುಖ ಬೆಳವಣಿಗೆಗೆ ಶೈಕ್ಷಣಿಕ ಪ್ರಗತಿ ಅತ್ಯಗತ್ಯ ಎಂದು ಸಂಸದ ಆರ್.ಧೃವನಾರಾಯಣ ಹೇಳಿದರು.

ಮೈಸೂರು ಸೇಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್  ಸಹಯೋಗದೊಂದಿಗೆ ಏರ್ಪಡಿಸಲಾದ ರಾಜ್ಯ ಮಟ್ಟದ ಪ್ರೌಢಶಾಲಾ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ಕಾರ್ಯಕ್ರಮವನ್ನು  ಸಂಸದ ಧೃವನಾರಾಯಣ್ ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು ಕೃಷಿ ಪ್ರಧಾನವಾದ ಭಾರತದಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸಲು  ವಿದ್ಯಾರ್ಥಿಗಳಲ್ಲಿ ಕೃಷಿಯ ಕುರಿತು ಅರಿವು ಮೂಡಿಸಬೇಕು ಎಂದರು.

ಭಾರತದಲ್ಲಿ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಇಲ್ಲಿನ ಕೃಷಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಶಿಕ್ಷಣದ ಜೊತೆಗೆ ಆಧುನಿಕ ಕೃಷಿಯ ಕುರಿತಾಗಿಯೂ ವಿದ್ಯಾರ್ಥಿಗಳ ಗಮನ ಸೆಳೆಯಬೇಕು ಎಂದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಶಿಕ್ಷಣದ ಜೊತೆ ಕೌಶಲ್ಯವನ್ನು ವಿದ್ಯಾರ್ಥಿಗಳಿಗೆ ಕಲಿಸುವ ಕೆಲಸವಾಗಬೇಕಿದೆ.  ಶಿಕ್ಷಕರು ವಿದ್ಯಾರ್ಥಿಗಳಿಗೆ ಅವರು ಜೀವನ  ರೂಪಿಸಿಕೊಳ್ಳುವುದರ ಕುರಿತಾಗಿಯೂ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯಿಮಾ ಸುಲ್ತಾನ್, ಮುಖ್ಯ ಕಾರ್ಯನಿರ್ವಾಹಣಾಕಾರಿ ಪಿ.ಶಿವಶಂಕರ್, ಎಂಡಿಇಎಸ್  ಕಾರ್ಯದರ್ಶಿ ಫಾದರ್ ಕೆ.ಎಂ.ವಿಲಿಯಂ, ಕರ್ನಾಟಕ ಪ್ರೌಢ ಶಿಕ್ಷಣ ಪರಿಷತ್  ಮಂಡಳಿ ಸಹನಿರ್ದೇಶಕ ಬಿ.ಕೆ.ಬಸವರಾಜ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್.ಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: