ಮೈಸೂರು

ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡವರಿಗೆ ಧೈರ್ಯ ಹೇಳಿದ ಕೆ.ಬಿ.ಶಿವಕುಮಾರ್

ಮೈಸೂರು,ಮಾ.15:- ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗುರುವಾರ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ, ನಿನ್ನೆ ಚಿಕ್ಕಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿಯಾಗಿ ಧೈರ್ಯ ಹೇಳಿದರು

ಭೀಕರ ಅಪಘಾತ ಸಂಭವಿಸಬಾರದಿತ್ತು. ಅಪಘಾತದಲ್ಲಿ ಮೃತಪಟ್ಟವರಿಗೆ 1 ಲಕ್ಷ ರೂ.ಗಳು ಹಾಗೂ ಗಾಯಗೊಂಡವರಿಗೆ 25 ಸಾವಿರ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ಸಮಾಧಾನ ಹೇಳಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: