
ಮೈಸೂರು
ನಮ್ಮ ಚಿತ್ತ ಮಕ್ಕಳ ಪ್ರತಿಭಾನ್ವೇಷಣೆಯತ್ತ
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಅಖಿಲ ಕರ್ನಾಟಕ ಪರಿಸರ ಜಾಗೃತಿ ವೇದಿಕೆ ವತಿಯಿಂದ ಪ್ರಬಂಧ ಸ್ಪರ್ಧೆ ಹಾಗೂ ಅಂದದ ಬರವಣಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಮೈಸೂರಿನ ಅರಮನೆ ಆವರಣದ ಬಳಿ ಇರುವ ಕೋಟೆ ಆಂಜನೇಯ ದೇವಳದ ಸಮೀಪ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ನಮ್ಮ ಚಿತ್ತ ಮಕ್ಕಳ ಪ್ರತಿಭಾನ್ವೇಷಣೆಯತ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಂದದ ಬರವಣಿಗೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಕಸಾಪ ಮಹಿಳಾ ಘಟಕದ ಉಪಮೇಯರ್ ವನಿತಾ ಪ್ರಸನ್ನ, ಸವಿಗನ್ನಡ ಪತ್ರಿಕೆಯ ಸಂಪಾದಕ ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.