ದೇಶಪ್ರಮುಖ ಸುದ್ದಿ

ಯುಪಿ ಸಿಎಂ ಆದಿತ್ಯನಾಥ್ ತಂದೆಗೆ ಬಿಗಡಾಯಿಸುತ್ತಿರುವ ಆರೋಗ್ಯ : ದೆಹಲಿ ಏಮ್ಸ್ ನಲ್ಲಿ ಹೆಚ್ಚಿನ ಚಿಕಿತ್ಸೆ ಸಾಧ್ಯತೆ

ದೇಶ(ನವದೆಹಲಿ)ಮಾ.16:- ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆಯವರ ಆರೋಗ್ಯ ಕ್ಷೀಣಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ ಎಂದು ತಿಳಿದು ಬಂದಿದೆ.

ತತ್ಕಾಲ ಏರ್ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. ಶರೀರದಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಕಾರಣ ಆರೋಗ್ಯದಲ್ಲಿ ಸ್ಥಿರತೆ ಕಂಡು ಬರುತ್ತಿಲ್ಲ. ಮಾರ್ಚ್ 12ಕ್ಕೆ ಆನಂದ್ ಸಿಂಗ್ ಅವರನ್ನು ಪೌರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜಾಲಿಗ್ರ್ಯಾಂಟ್ ಹಿಮಾಲಯನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ದೇಹಲಿಗೆ ಕರೆದೊಯ್ಯಲು ನಿರ್ಧರಿಸಲಾಗಿದೆ. ಅಲ್ಲಿ ಅವರ ಕರುಳಿನ ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.(ಎಸ್.ಎಚ್)

Leave a Reply

comments

Related Articles

error: