ಸುದ್ದಿ ಸಂಕ್ಷಿಪ್ತ

ಮಾ. 20-26 : ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಷ್ಟ್ರೀಯ ಭಾವೈಕ್ಯತಾ ಶಿಬಿರ

ಮೈಸೂರು,ಮಾ.17:- ಸಿದ್ಧಾರ್ಥನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗ ಹಾಗೂ  ಮೈಸೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಮಾರ್ಚ್ 20 ರಿಂದ 26 ರವರೆಗೆ ಸರಸ್ವತಿಪುರಂನ ಎನ್‍ಎಸ್‍ಎಸ್ ಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 21 ರಂದು ಬೆಳಿಗ್ಗೆ 11 ಗಂಟೆಗೆ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಆತ್ಮಜ್ಞಾನನಂದಜೀ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಎಂ.ಕೆ.ಸೋಮಶೇಖರ್, ಮೈಸೂರು ವಿಶ್ವ ವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ.ಸಿ.ಬಸವರಾಜು, ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶಕ ಎ.ಎನ್.ಪೂಜಾರ್, ಕಾರ್ಯಕ್ರಮ ಸಂಯೋಜಕ ಡಾ.ಬಿ.ಚಂದ್ರಶೇಖರ್ ಹಾಗೂ ಪ್ರಾಂಶುಪಾಲ ಪ್ರೊ. ದಿವಾಕರ್ ಹೆಚ್.ಇ. ಮುಖ್ಯ ಅಥಿತಿಗಳಾಗಿ ಭಾಗವಹಿಸುವರು.

ಮಾರ್ಚ್ 26 ರಂದು ಸಮರೋಪ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೇಶ್ ಗೋಯಲ್, ಬೆಂಗಳೂರಿನ ಕರ್ನಾಟಕ ಗಾಂಧಿ  ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ.ಜಿ.ಬಿ.ಶಿವರಾಜು, ಮೈಸೂರು ವಿಶ್ವ ವಿದ್ಯಾನಿಲಯದ ಕುಲಸಚಿವೆ ಡಿ.ಭಾರತಿ, ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರ್, ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ.ಹೆಚ್.ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: