ಮನರಂಜನೆ

ಪವರ್ ಸ್ಟಾರ್ ಹುಟ್ಟಹಬ್ಬ ಆಚರಿಸಿದ ಪೊಲೀಸರು

ಬೆಂಗಳೂರು,ಮಾ.17-ಸ್ಟಾರ್ ನಟರ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಡುವ ಪೊಲೀಸರು ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

ಹೌದು, ಸದಾಶಿವ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಅಪ್ಪು ನಿವಾಸಕ್ಕೆ ಭೇಟಿ ನೀಡಿ ಪುನೀತ್ ರಾಜ್ ಕುಮಾರ್ ಅವರ 43ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಆಚರಿಸಿದ್ದಾರೆ.

ಸಾವಿರಾರು ಅಭಿಮಾನಿಗಳು ಅಪ್ಪು ಅವರಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದು, ಈ ರೀತಿ ಪೊಲೀಸರು ಅಪ್ಪು ಹುಟ್ಟಹಬ್ಬ ಆಚರಿಸಿರುವುದು ವಿಶೇಷವಾಗಿದೆ.

ಇನ್ನುಳಿದಂತೆ ಪುನೀತ್ ಹುಟ್ಟುಹಬ್ಬದ ಪ್ರಯುಕ್ತ ‘ನಟ ಸಾರ್ವಭೌಮ’ ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆಯಾಗಿದೆ. ಅಪ್ಪು ಜನುಮದಿನದ ವಿಶೇಷವಾಗಿ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿರುವ ಚಿತ್ರದ ಸ್ಪೆಷಲ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. (ಎಂ.ಎನ್)

Leave a Reply

comments

Related Articles

error: