ಸುದ್ದಿ ಸಂಕ್ಷಿಪ್ತ

ಕುಂದುಕೊರತೆ ಸ್ವೀಕಾರ

ಮೈಸೂರು,ಮಾ.19:-  ಕೈಗಾರಿಕೋದ್ಯಮಿಗಳ ಕುಂದು ಕೊರತೆ ನಿವಾರಣೆ ಬಗ್ಗೆ ಸರ್ಕಾರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದು, ಸದರಿ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು, ಜಂಟಿ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಕೈಗಾರಿಕೋದ್ಯಮಿಗಳು ಕೆ.ಐ.ಎ.ಡಿ.ಬಿ, ಕೆ.ಎಸ್.ಎಸ್.ಐ.ಡಿ.ಸಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಚೆಸ್ಕಾಂ ಹಾಗೂ ಇತರೆ ಇಲಾಖೆಗಳಿಂದ ಯಾವುದೇ ಕುಂದು ಕೊರತೆಗಳಿದ್ದಲ್ಲಿ ನಿವಾರಣೆಗೆ ವಿವರಗಳನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಗಾ ಕೇಂದ್ರ, ಸಯ್ಯಾಜಿರಾವ್ ರಸ್ತೆ, ಸಿ.ಟಿ.ಐ ಕಟ್ಟಡ, ಮೈಸೂರು ಇಲ್ಲಿಗೆ ಸಲ್ಲಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: