ಸುದ್ದಿ ಸಂಕ್ಷಿಪ್ತ
ಮಾ.20 : ಮಾಧವಮಂತ್ರಿ ಅಣೆಕಟ್ಟಿನ ಶಿಲಾನ್ಯಾಸ ಸಮಾರಂಭ
ಮೈಸೂರು,ಮಾ.20:- ಜಲ ಸಂಪನ್ಮೂಲ ಇಲಾಖೆ ಕಾವೇರಿ ನೀರಾವರಿ ನಿಗಮ ವತಿಯಿಂದ ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲೂಕು ತಲಕಾಡು ಗ್ರಾಮದ ಬಳಿಯ ಮಾಧವಮಂತ್ರಿ ಅಣೆಕಟ್ಟಿನ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಸಮಾರಂಭವನ್ನು ಮಾರ್ಚ್ 20 ರಂದು ಬೆಳಿಗ್ಗೆ 11.30 ಕ್ಕೆ ತಲಕಾಡಿನ ಸರ್ಕಾರಿ ಪ್ರೌಢಶಾಲೆ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಿಲಾನ್ಯಾಸ ನೆರವೇರಿಸುವರು. ಭಾರೀ ಮತ್ತು ಮಧ್ಯಮ ನೀರಾವರಿ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಅವರು ಘನ ಉಪಸ್ಥಿತಿ ವಹಿಸುವರು. ಕರ್ನಾಟಕ ವಿಧಾನ ಪರಿಷತ್ನ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಯೀಮಾ ಸುಲ್ತಾನ್ ನಜೀರ್ ಅಹಮದ್, ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ, ವಿಧಾನ ಪರಿಷತ್ ಸದಸ್ಯ ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ. ನಾರಾಯಣ ಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಿ. ನಟರಾಜು, ಟಿ.ನರಸೀಪುರ ತಾಲೂಕು ಪಂಚಾಯಿತಿ ಅಧ್ಯಕ್ಷ ಆರ್.ಚೆಲುವರಾಜು, ಉಪಾಧ್ಯಕ್ಷೆ ಸುಂದರಮ್ಮ, ಟಿ.ನರಸೀಪುರ ವಸತಿ ಮತ್ತು ಜಾಗೃತಿ ಸಮಿತಿ ಅಧ್ಯಕ್ಷ ಸುನೀಲ್ ಬೋಸ್ ಹಾಗೂ ತಲಕಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ.ಹೆಚ್.ಕವಿತಾ ವಿಜಯ್ ಕುಮಾರ್ ನಾಯಕ್ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)