ಮೈಸೂರು

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಾಲೂಕು ಕಚೇರಿಗೆ ಭೇಟಿ: ಅರ್ಜಿಗಳ ತ್ವರಿತ ವಿಲೇವಾರಿಗೆ ಸೂಚನೆ

ಮೈಸೂರು, ಮಾರ್ಚ್ 21:- ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮೈಸೂರು ತಾಲೂಕು ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಾರ್ವಜನಿಕರ ಕುಂದು ಕೊರತೆಗಳ ಅರ್ಜಿಗಳನ್ನು ತ್ವರತವಾಗಿ ವಿಲೇವಾರಿ ಮಾಡಿ, ಜನರಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

ನಿನ್ನೆ ತಾಲೂಕು ಕಛೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿಯ ಶಿರಸ್ತೆದಾರ್, ಹಾಗೂ ಇತರ ಸಿಬ್ಬಂದಿಗಳ ಸಭೆ ನಡೆಸಿ, ಭೂಮಿ ಕೇಂದ್ರ, ಅಟಲ್‍ಜಿ ಜನಸ್ನೇಹಿ ಕೇಂದ್ರದ ಬಾಕಿ ಇರುವ ಕಡತಗಳ ಪರಿಶೀಲನೆ ನಡೆಸಿದರು. ಸಂಧ್ಯಾ ಸುರಕ್ಷಾ, ವಿಧವಾ ವೇತನ, ರಾಷ್ಟ್ರೀಯ ಕುಟುಂಬ ಭದ್ರತಾ ಯೋಜನೆ, 94 ಸಿ.ಸಿ., ಮನಸ್ವಿನಿ, ಮೈತ್ರಿ, ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ವತಿಯಿಂದ ಮಾಡಿಕೊಂಡಿರುವ ಸಿದ್ಧತೆಗಳ ಮಾಹಿತಿ ಪಡೆದರು. ಚುನಾವಣೆ ಕರ್ತವ್ಯ ಅತ್ಯಂತ ಜವಾಬ್ದಾರಿಯುತ ಕರ್ತವ್ಯವಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವ್ಯವಸ್ಥಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಸೂಚನೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ತಾಲೂಕು ಆಡಳಿತ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದರು. ನಮೂನೆ, 6, 7, 8 ಮತ್ತು 8ಎ ಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿರುವುದನ್ನು ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವೇಗೌಡ, ತಹಶೀಲ್ದಾರ್ ರಮೇಶ್‍ಬಾಬು ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: