ಕರ್ನಾಟಕ

ಇಂದು ಶೃಂಗೇರಿ ಶಾರದ ಪೀಠಕ್ಕೆ ರಾಹುಲ್ ಗಾಂಧಿ ಭೇಟಿ

ಚಿಕ್ಕಮಗಳೂರು,ಮಾ.21-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಶಾರದ ಪೀಠಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ.

ಶೃಂಗೇರಿ ಶಾರದ ಪೀಠಕ್ಕೂ ಗಾಂಧಿ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ಶೃಂಗೇರಿ ಮಠಕ್ಕೆ ಇಂದಿರಾಗಾಂಧಿ, ರಾಜೀವ್ ಗಾಂಧಿ ಅನೇಕ ಬಾರಿ ಭೇಟಿ ನೀಡಿದ್ದಾರೆ. ಇದೀಗ ಗಾಂಧಿ ಕುಟುಂಬದ ನಾಲ್ಕನೇ ಕುಡಿ ರಾಹುಲ್ ಗಾಂಧಿ ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ನೀಡುತ್ತಿದ್ದಾರೆ.

ರಾಷ್ಟ್ರಾದ್ಯಂತ ಕಾಂಗ್ರೆಸ್ ನೆಲಕಚ್ಚಿದ್ದ ಸಂದರ್ಭದಲ್ಲಿ ಇಂದಿರಾಗಾಂಧಿ ಚಿಕ್ಕಮಗಳೂರಿನಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು. ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಶೃಂಗೇರಿ ಗೆ ಭೇಟಿ ನೀಡಿದ್ದ ಇಂದಿರಾಗಾಂಧಿ ಶಕ್ತಿ ದೇವತೆ ಶಾರದಾಂಬೆಯ ದರ್ಶನ ಮಾಡಿ ಗೆಲುವಿನ ಆಶೀರ್ವಾದ ಬೇಡಿದ್ದರು. ಗೆದ್ದ ನಂತರವೂ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆದಿದ್ದರು.

ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಮಗಳೂರಿನ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಭಾಷಣ ಮಾಡಿದ್ದ ಮೈದಾನದಲ್ಲೇ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. (ಎಂ.ಎನ್)

 

Leave a Reply

comments

Related Articles

error: