ಮೈಸೂರು

ನಂಬಿದವರನ್ನು ಮುಗಿಸುವುದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ಕೆಲಸ : ಜಮೀರ್ ಅಹ್ಮದ್ ಆರೋಪ

ಮೈಸೂರು,ಮಾ.21:- ನಂಬಿದವರನ್ನು ಮುಗಿಸುವುದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ಕೆಲಸ. ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಆರೋಪಿಸಿದರು.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನಗೆ ಬೇರೆಯವರಿಂದ‌ ಬೆದರಿಕೆ ಹಾಕಿಸುತ್ತಿದ್ದಾರೆ.ಅವರ ಬೆದರಿಕೆಗೆ ನಾನು ಬಗ್ಗುವುದಿಲ್ಲ. ಪುನಃಪಕ್ಷಕ್ಕೆ‌ ಬರುವಂತೆ ಹೇಳುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಮತ್ತೆ ಜೆಡಿಎಸ್ ಗೆ ಹೋಗುವುದಿಲ್ಲ. ನಾನು ಈಗಾಗಲೇ ಕಾಂಗ್ರೆಸ್ ಜೊತೆ ಇದ್ದೇನೆ. ಇದೇ ತಿಂಗಳು 25 ರಂದು ರಾಹುಲ್ ಗಾಂಧಿ ಹಾಗೂ ಸಿಎಂ‌ಸಿದ್ದರಾಮಯ್ಯ ನವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ ಎಂದರು.

ರಾಜ್ಯ ಸಭಾ ಚುನಾವಣೆ ಅಡ್ಡ ಮತದಾನ ಮಾಡಿದ್ದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗುತ್ತೇವೆ. ಈ ಸಂದರ್ಭದಲ್ಲಿ ಈ ಹೋರಾಟದ ಅವಶ್ಯಕತೆ ಇಲ್ಲ. ಅದರ ಜೊತೆಗೆ ವಿಪ್ ಜಾರಿ ಮಾಡಿದ್ದಾರೆ. ಈಗಾಗಲೇ ನಮ್ಮನ್ನು ಜೆ ಡಿ ಎಸ್ ವರಿಷ್ಠರು ಪಕ್ಷ ಸೇರಲು ಒತ್ತಡ ಹೇರಿದ್ದಾರೆ. ನಮ್ಮ ಬಂಡಾಯ ಶಾಸಕರಿಗೆ ಬ್ಲಾಕ್ ಮೇಲ್ ತಂತ್ರ ರೂಪಿಸುತ್ತಿದ್ದಾರೆ. ಜೆ ಡಿ ಎಸ್ ವರಿಷ್ಠರು ನನ್ನನ್ನು ಸೋಲಿಸಲು ಯಾವ ತಂತ್ರ ರೂಪಿಸಿದರೂ ಪ್ರಯೋಜನವಿಲ್ಲ. ಈ ತಿಂಗಳ 25 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಮೈಸೂರಿನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ರಾಜ್ಯ ಸಭಾ ಚುನಾವಣೆಯಲ್ಲಿ ಜೆ ಡಿ ಎಸ್ ಗೆ ಗೆಲ್ಲುವ ಅವಕಾಶ ಇಲ್ಲ. ಬಂಡಾಯ ಶಾಸಕರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಬರುತ್ತೆ ಎಂಬ ವಿಶ್ವಾಸವಿದೆ. ನನ್ನ ಬೆಂಬಲಿಗರೂ ಕೂಡ ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಮೀರ್ ಅಹ್ಮದ್ ಬೆಂಬಲಿಗರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: