ಸುದ್ದಿ ಸಂಕ್ಷಿಪ್ತ

ಕಾನೂನು ಅರಿವು ಕಾರ್ಯಕ್ರಮ

ಮೈಸೂರು,ಮಾ.22:-  ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾವರ್ಧಕ ಕಾನೂನು ಕಾಲೇಜು ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಮಾರ್ಚ್ 22 ರಂದು ಬೆಳಿಗ್ಗೆ 10.30 ಕ್ಕೆ  ವಿದ್ಯಾವರ್ಧಕ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ವಂಟಿಗೊಡಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿದ್ಯಾವರ್ಧಕ ಕಾನೂನು ಕಾಲೇಜಿನ ಪ್ರೊ ಕೆ.ಬಿ ವಾಸುದೇವ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಜಿ.ವಿ ರಾಮಮೂರ್ತಿ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: