
ಮೈಸೂರು
ಆಕ್ರೋಶ್ ದಿನ ಆಚರಣೆ ಹಿನ್ನೆಲೆ: ಕಾಂಗ್ರೆಸ್ನಿಂದ ಪ್ರತಿಭಟನೆ
ಕೇಂದ್ರ ಸರಕಾರ 500 ಮತ್ತು 1000 ರೂ. ನೋಟು ರದ್ದು ಮಾಡಿರುವುದನ್ನು ಖಂಡಿಸಿ ಸೋಮವಾರದಂದು ಆಕ್ರೋಶ್ ದಿನ ಆಚರಣೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದ ಗಾಂಧಿ ಚೌಕದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಮೋದಿ ನೇತೃತ್ವದ ಸರಕಾರವು ಏಕಾಏಕಿ ನೋಟು ರದ್ದು ಮಾಡಿ ಜನಸಾಮಾನ್ಯರಿಗೆ ತೊಂದರೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಪ್ರಧಾನಿ ಮೋದಿ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಶಾಸಕರಾದ ವಾಸು, ಎಂ.ಕೆ. ಸೋಮಶೇಖರ್, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಮಾದೇಗೌಡ ಮೊದಲಾದವರು ಭಾಗವಹಿಸಿದ್ದರು.