ಕರ್ನಾಟಕ

ಕಾರಿನ ಮೇಲೆ ಉರುಳಿಬಿದ್ದ ಮರ : ಐವರಿಗೆ ಗಾಯ

ತುಮಕೂರು,ಮಾ.23: ಬೃಹದಾಕಾರದ ಮರ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಘಟನೆ ತುಮಕೂರು ತಾಲೂಕಿನ ಹನುಮಂತ ನಗರದಲ್ಲಿ ನಡೆದಿದೆ.

ತುಮಕೂರಿನ ಕ್ಯಾತಸಂದ್ರ ದರ್ಗಾಕ್ಕೆ ಭೇಟಿ ಕೊಟ್ಟು ಕುಣಿಗಲ್ ಗೆ ವಾಪಸ್ ಆಗುವಾಗ ಈ ಘಟನೆ ನಡೆದಿದೆ. ಮರ ಉರುಳಿ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮೈ ಜುಂ ಎನಿಸುತ್ತದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಬ್ಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. (ವರದಿ: ಪಿ.ಎಸ್ )

Leave a Reply

comments

Related Articles

error: