ಸುದ್ದಿ ಸಂಕ್ಷಿಪ್ತ

ಮಾ.24ಕ್ಕೆ ವಿದ್ಯುತ್ ಸರಬರಾಜು ಸ್ಥಗಿತ

ಮಡಿಕೇರಿ,ಮಾ.23-ಮಡಿಕೇರಿ ನಗರದಲ್ಲಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್2 ಗದ್ದಿಗೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವುದರಿಂದ ಮಾ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಮಹದೇವಪೇಟೆ, ಗೌಡಸಮಾಜ, ಗದ್ದಿಗೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಚನ್, ಭಗವತಿ ನಗರ, ಸಂಪಿಗೆಕಟ್ಟೆ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: