ಸುದ್ದಿ ಸಂಕ್ಷಿಪ್ತ

ಮಾ.27ಕ್ಕೆ ವಿಶ್ವ ರಂಗಭೂಮಿ ದಿನಾಚರಣೆ

ಮೈಸೂರು,ಮಾ.24-ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ, ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದೊಂದಿಗೆ ಮಾ.27 ರಂದು ಸಂಜೆ 6.30ಕ್ಕೆ ಕಲಾಮಂದಿರದ ಕಿರುರಂಗಮಂದಿರದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈ.ಎಂ.ಪುಟ್ಟಣ್ಣಯ್ಯ, ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಎಸ್.ಎಸ್.ಗಾಯತ್ರಿ, ಮಂಡ್ಯ ರಮೇಶ್ ಅವರನ್ನು ಅಭಿನಂದಿಸಲಾಗುವುದು.

ರಂಗಾಯಣದ ನಿರ್ದೇಶಕಿ ಭಾಗೀರಥಿಬಾಯಿ ಕದಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ ಉಪಸ್ಥಿತರಿರಲಿದ್ದಾರೆ. (ಎಂ.ಎನ್)

Leave a Reply

comments

Related Articles

error: